ತಮಿಳುನಾಡು ರೈತರ ಸಾಲಮನ್ನಾ: ಮದ್ರಾಸ್ ಹೈಕೋರ್ಟ್ ಆದೇಶಕ್ಕೆ “ಸುಪ್ರೀಂ” ತಡೆ

0
ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ತಮಿಳುನಾಡು ರೈತರಿಗೆ ಭಾರಿ ಹಿನ್ನಡೆಯಾಗಿದ್ದು, ಈ ಹಿಂದೆ ರೈತರ ಸಾಲಮನ್ನಾ ಮಾಡುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡಲಾಗಿದೆ.ಈ ಹಿಂದೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರವನ್ನು ಉದ್ದೇಶಿಸಿ ಕೇವಲ 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರ ಸಾಲ ಮಾತ್ರವಲ್ಲದೇ 5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವ ರೈತರ ಸಾಲವನ್ನು  ಕೂಡ ಮನ್ನಾ ಮಾಡಬೇಕು ಎಂದು ಹೇಳಿತ್ತು.
ಆದರೆ ಮದ್ರಾಸ್ ಹೈಕೋರ್ಟ್ ನ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಮದನ್ ಬಿ ಲೋಕೂರ್ ಅವರು ನೋಟಿಸ್ ಜಾರಿ ಮಾಡಿ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಡೆ ಹಿಡಿದಿದ್ದಾರೆ.
ಇದಕ್ಕೂ ಮೊದಲು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದ ತಮಿಳುನಾಡು ಸರ್ಕಾರದ ಪರ ವಕೀಲರು, ಸಾಲಮನ್ನಾ ಎಐಎಡಿಎಂಕೆ ಪಕ್ಷದ ಚುನಾವಣಾ ಪ್ರಣಾಳಿಕೆಯಾಗಿತ್ತು. ಅಲ್ಲದೆ ಸಣ್ಣ ಮತ್ತು ಮಧ್ಯಮ ವರ್ಗದ ರೈತರ  ಸಮಸ್ಯೆ ಬಗೆಹರಿಸುವುದಕ್ಕಾಗಿ ಸಾಲಮನ್ನಾ ಮಾಡಲಾಗಿತ್ತು.
ಆದರೆ ಮದ್ರಾಸ್ ಹೈಕೋರ್ಟ್ ಆದೇಶದಿಂದಾಗಿ ಸರ್ಕಾರದ ಭೋಕ್ಕಸಕ್ಕೆ ಭಾರಿ ಪ್ರಮಾಣದ ಹೊರೆಯಾಗುತ್ತದೆ. ಇದರಿಂದಾಗಿ ಆರ್ಥಿಕ ಸಂಕಷ್ಟ ಎದುರಾಗುತ್ತದೆ  ಎಂದು ಸುಪ್ರೀಂ ಕೋರ್ಟ್ ನಲ್ಲಿ ಮನವಿ ಮಾಡಿತ್ತು.
ಈ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ಪ್ರಸ್ತುತ ರೈತರ ಸಾಲಮನ್ನಾ ಮಾಡುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಡೆ ಹಿಡಿದು ನೋಟಿಸ್ ಜಾರಿ ಮಾಡಿದೆ. ಅಂತೆಯೇ ವಿಚಾರಣೆಯನ್ನು ಮುಂದೂಡಿದೆ.ಈ ಹಿಂದೆ ತೀವ್ರ ತಮಿಳುನಾಡು ರೈತರು ದೆಹಲಿಯಲ್ಲಿ ಅರೆ ಬೆತ್ತಲೆ ಪ್ರತಿಭಟನೆ ಮಾಡುವ ಮೂಲಕ ಸಾಲಮನ್ನಾ ಮಾಡಬೇಕು ಎಂದು ನಿರಂತರ ಧರಣಿ ನಡೆಸಿದ್ದರು.

Comments

comments

LEAVE A REPLY

Please enter your comment!
Please enter your name here