ಪುಲ್ವಾಮ ಎನ್’ಕೌಂಟರ್: ಅಡಗಿದ್ದ ಕುಳಿತಿದ್ದ ಮೂರನೇ ಉಗ್ರನನ್ನು ಸದೆಬಡಿದ ಸೇನೆ

0

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದಲ್ಲ ಪುಲ್ವಾಮ ಜಿಲ್ಲೆಯಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡುವುದಲ್ಲಿ ಯಶಸ್ವಿಯಾಗಿದೆ.

ನಿನ್ನೆಯಷ್ಟೇ ಪುಲ್ವಾಮ ಜಿಲ್ಲೆಯ ಬಮ್ನೂ ಎಂಬ ಪ್ರದೇಶದಲ್ಲಿ ಮೂವರು ಉಗ್ರರು ದಾಳಿ ನಡೆಸಿದ್ದರು. ಕೂಡಲೇ ಕಾರ್ಯಾಚರಣೆಗಿಳಿದಿದ್ದ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿತ್ತು. ಮತ್ತೊಬ್ಬ ಉಗ್ರ ಅಡಗಿ ಕುಳಿತು ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ.

ಇದರಂತೆ ಸೇನಾ ಪಡೆ ಕಾರ್ಯಾಚರಣೆಯನ್ನು ಮುಂದುವರೆಸಿತ್ತು. ಇದೀಗ ಅಡಗಿ ಕುಳಿತಿದ್ದ ಮತ್ತೊಬ್ಬ ಮೂರನೇ ಉಗ್ರನನ್ನು ಸೇನೆ ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ಉಗ್ರರು ಬಳಿಸಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ಸೇನಾ ಪಡೆ ವಶಕ್ಕೆ ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕಾರ್ಯಾಚರಣೆ ವೇಳೆ ಕೆಲ ಸ್ಥಳೀಯರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಈ ವೇಳೆ 10 ನಾಗರಿಕರಿಗೆ ಗಾಯಗಳಾಗಿರುವುದಾಗಿ ವರದಿಗಳು ತಿಳಿಸಿವೆ.

Comments

comments

LEAVE A REPLY

Please enter your comment!
Please enter your name here